'ಎಂದಿಗೂ 'ತಲೆಬಾಗುವುದಿಲ್ಲ': ಗಾಂಧೀ ಜಯಂತಿ ಹಿನ್ನೆಲೆ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ರಾಹುಲ್ ಹೇಳಿಕೆ

ಅನ್ಯಾಯ ಮಾಡುವವರ ಎದುರು ಎಂದಿಗೂ ತಲೆಬಾಗುವುದಿಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಅನ್ಯಾಯ ಮಾಡುವವರ ಎದುರು ಎಂದಿಗೂ ತಲೆಬಾಗುವುದಿಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟಲ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಪ್ರಪಂಚದಲ್ಲಿ ನಾನು ಯಾರಿಗೂ ಹೆದರುವುದಿಲ್ಲ. ಅನ್ಯಾಯದ ವಿರುದ್ಧ ಯಾರೊಬ್ಬರ ಮುಂದೆಯೂ ತಲೆಬಾಗುವುದಿಲ್ಲ. ಅಸತ್ಯವನ್ನು ಸತ್ಯದಿಂದ ಗೆಲ್ಲುತ್ತನೆ. ಅಸತ್ಯ ವಿರೋಧಿಸುವಾಗ ಎಲ್ಲಾ ನೋವುಗಳನ್ನು ನಾನು ಸಹಿಸಿಕೊಳ್ಳಬಲ್ಲೆ ಎಂದು ಹೇಳಿದ್ದಾರೆ. 

ಉತ್ತರಪ್ರದೇಶದ ಹತ್ರಾಸ್ ನಲ್ಲಿ ಅತ್ಯಾಚಾರಿಗಳಿಗೆ ಬಲಿಯಾದ 19 ವರ್ಷದ ದಲಿತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲು ನಿನ್ನೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಉತ್ತರಪ್ರದೇಶಕ್ಕೆ ಹೊರಟಿದ್ದರು. 

ಈ ವೇಳೆ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್'ಪ್ರೆಸ್ ವೇ ಬಳಿ ರಾಹುಲ್, ಪ್ರಿಯಾಂಕ್ ಅವರ ವಾಹನಗಳನ್ನು ಪೊಲೀಸರು ತಡೆದಿದ್ದರು. ಈ ವೇಳೆ ಪಕ್ಷದ ಕಾರ್ಯಕರ್ತರ ಜೊತೆಗೂಡಿದ ರಾಹುಲ್ ಮತ್ತು ಪ್ರಿಯಾಂಕಾ ನಡೆದುಕೊಂಡೇ ಹೆದ್ದಾರಿಯಲ್ಲಿ ಹೊರಟ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ಜೀಪಿನಲ್ಲಿ ಕರೆದೊಯ್ದು ಗೆಸ್ಟ್ ಹೌಸ್ ವೊಂದರಲ್ಲಿ ಇಟ್ಟಿದ್ದರು. ಕೆಲ ಹೊತ್ತಿನ ಬಳಿಕ ಬಿಡುಗಡೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com