ರಾಹುಲ್ ಗಾಂಧಿ ನೇತೃತ್ವದ ನಿಯೋಗದಿಂದ ಇಂದು ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಭೇಟಿ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ  ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.

Published: 03rd October 2020 09:35 AM  |   Last Updated: 03rd October 2020 09:43 AM   |  A+A-


Rahul_Gandhi1

ರಾಹುಲ್ ಗಾಂಧಿ

Posted By : Nagaraja AB
Source : Online Desk

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ  ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.

ಪಕ್ಷದ ಸಂಸದರೊಂದಿಗೆ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಹತ್ರಾಸ್ ಗೆ ಭೇಟಿ ನೀಡಲಿದ್ದು, ಬರ್ಬರ ರೀತಿಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿರುವ 19 ವರ್ಷದ ಹೆಣ್ಣುಮಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

 

ಈ ಮಧ್ಯೆ ಹತ್ರಾಸ್ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಗ್ರಾಮವನ್ನು ಬ್ಲಾಕ್ ಮಾಡಿರುವ ಪೊಲೀಸರು, ಮಾಧ್ಯಮಗಳಿಗೂ ಅವಕಾಶ ನೀಡುತ್ತಿಲ್ಲ.ಆದಾಗ್ಯೂ, ಖಾಸಗಿ ಚಾನೆಲ್ ವೊಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರನ್ನು ಭೇಟಿ ಮಾಡಿದ್ದು, ತಮ್ಮನ್ನು ಭಾರೀ ಪೊಲೀಸ್ ಭದ್ರತೆಯಲ್ಲಿ ಇಡಲಾಗಿದೆ. ಅಧಿಕ ಒತ್ತಡ ಹಾಗೂ ಭಯದಲ್ಲಿ ಬದುಕುತ್ತಿರುವುದಾಗಿ ಅವರು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp