ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 79,476 ಕೇಸ್ ಪತ್ತೆ, ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು, 7 ತಿಂಗಳ ಅವಧಿಯಲ್ಲಿ ಈ ಮಹಾಮಾರಿ ವೈರಸ್'ಗೆ ಬಲಿಯಾದವರ ಸಂಖ್ಯೆ ಶನಿವಾರ 1 ಲಕ್ಷ ಗಡಿದಾಟಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು, 7 ತಿಂಗಳ ಅವಧಿಯಲ್ಲಿ ಈ ಮಹಾಮಾರಿ ವೈರಸ್'ಗೆ ಬಲಿಯಾದವರ ಸಂಖ್ಯೆ ಶನಿವಾರ 1 ಲಕ್ಷ ಗಡಿದಾಟಿದೆ. 

ಕೇಂದ್ರ ಆರೋಗ್ಯ ಇಲಾಖೆ ಪ್ರಕಾರ ಶನಿವಾರ ಮುಂಜಾನೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕೊರೋನಾಕ್ಕೆ 1,069 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ. ಈ ಮೂಲಕ ಭಾರತವು ಅಮೆರಿಕಾ ಮತ್ತು ಬ್ರೆಜಿಲ್ ಬಳಿಕ ಕೊರೋನಾಕ್ಕೆ 1 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾದ ವಿಶ್ವದ 3ನೇ ರಾಷ್ಟ್ರವಾಗಿದೆ. 

ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಇಂದು ಒಟ್ಟಾರೆ 79,476 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿಕೆಯಾಗಿದೆ. 

ಇನ್ನು 64,73,545 ಮಂದಿ ಸೋಂಕಿತರ ಪೈಕಿ 54,27,707 ಮಂದಿ ಗುಣಮುಖರಾಗಿದ್ದು, ದೇಶದಲ್ಲಿನ್ನೂ 9,44,996 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ದೇಶಾದ್ಯಂತ 24 ಗಂಟೆಗಳಲ್ಲಿ 11,32,675 ಕೋವಿಡ್ ಪರೀಕ್ಷೆ, ಒಟ್ಟಾರೆ 7.78 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,32,675 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,32,675 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.2ರವರೆಗೂ 7,78,50,403 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com