ಹತ್ರಾಸ್ ಪ್ರಕರಣ ಸಿಬಿಐಗೆ ವಹಿಸಿದ ಸಿಎಂ ಯೋಗಿ; ಮೃತ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ಪ್ರಿಯಾಂಕಾ!

ಹತ್ರಾಸ್ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಿಬಿಐಗೆ ವರ್ಗಾಯಿಸಿದ್ದಾರೆ. 
ಯೋಗಿ-ಪ್ರಿಯಾಂಕಾ
ಯೋಗಿ-ಪ್ರಿಯಾಂಕಾ

ಲಖನೌ: ಹತ್ರಾಸ್ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಿಬಿಐಗೆ ವರ್ಗಾಯಿಸಿದ್ದಾರೆ. 

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ವಿಪಕ್ಷಗಳು ದೇಶದ ಜನತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದವು. ಇದೀಗ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮೂಲಕ ಖಚಿತ ಪಡಿಸಿದೆ. 

ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಹತ್ರಾಸ್ ಗ್ರಾಮಕ್ಕೆ ತೆರಳಿ ಸಂತ್ರಸ್ತೆಯ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. 

ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com