ಹತ್ರಾಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವುದು ಮಹಿಳೆಯ ಕುಟುಂಬಸ್ಥರ ಬೇಡಿಕೆಯಾಗಿದೆ: ಪ್ರಿಯಾಂಕಾ ಗಾಂಧಿ

ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಲವು ವಿಚಾರಗಳ ಕುರಿತು ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.
ನಿನ್ನೆ ಹತ್ರಾಸ್ ನಲ್ಲಿ ಮೃತ ದಲಿತ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ
ನಿನ್ನೆ ಹತ್ರಾಸ್ ನಲ್ಲಿ ಮೃತ ದಲಿತ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ

ನವದೆಹಲಿ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಲವು ವಿಚಾರಗಳ ಕುರಿತು ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು ಸುಪ್ರೀಂ ಕೋರ್ಟ್ ಮೂಲಕ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ನಿನ್ನೆ ಮೃತ ದಲಿತ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ದಲಿತ ಮಹಿಳೆಯ ಮನೆಯವರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಭೇಟಿ ಮಾಡಿ ಬಂದ ನಂತರ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಕೆಲವು ಬೇಡಿಕೆಗಳನ್ನು ಮತ್ತು ಪ್ರಶ್ನೆಗಳನ್ನು ಉತ್ತರ ಪ್ರದೇಶ ಸರ್ಕಾರದ ಮುಂದಿಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು, ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರನ್ನು ಸೇವೆಯಿಂದ ಅಮಾನತುಗೊಳಿಸಬೇಕು, ಮೃತ ಮಹಿಳೆಯ ದೇಹವನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಪದೇ ಪದೇ ಏಕೆ ನಮ್ಮನ್ನು ಹಾದಿತಪ್ಪಿಸುವುದು ಮತ್ತು ಬೆದರಿಕೆ ಹಾಕುತ್ತಿರುವುದು, ಮಾನವೀಯತೆಗಾಗಿ ನಾವು ಮೃತದೇಹವನ್ನು ಕಳುಹಿಸಿದರು, ಆದರೆ ಅದು ನಮ್ಮ ಮಗಳ ಮೃತದೇಹವೆಂದು ಹೇಗೆ ಗೊತ್ತಿದೆ ಎಂದು ಕುಟುಂಬಸ್ಥರು ಕೇಳುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಶ್ನೆ ಮಾಡುವುದು ಕುಟುಂಬಸ್ಥರ ಹಕ್ಕಾಗಿದ್ದು ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಉತ್ತರ ನೀಡಬೇಕು ಎಂದು ರಾಜ್ಯದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com