ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಗೆ ಹೃದಯ ಶಸ್ತ್ರಚಿಕಿತ್ಸೆ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಪುತ್ರ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್
ರಾಮ್ ವಿಲಾಸ್ ಪಾಸ್ವಾನ್

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಪುತ್ರ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

ಅಲ್ಲದೆ ಅಗತ್ಯವಿದ್ದಲ್ಲಿ ಮುಂದಿನ ವಾರಗಳಲ್ಲಿ ತನ್ನ ತಂದೆಗೆ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಚಿರಾಗ್ ಹೇಳಿದ್ದಾರೆ.

ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಚಿರಾಗ್  "ಕಳೆದ ಹಲವು ದಿನಗಳಿಂದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಸಂಜೆ ಕೆಲವು ಹಠಾತ್ ಬೆಳವಣಿಗೆಗಳಿಂದಾಗಿ, ತಡರಾತ್ರಿಯಲ್ಲಿ ಅವರ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅಗತ್ಯವಿದ್ದಲ್ಲಿ, ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಿಸಬೇಕಾಗುವುದು ಈ ಹೋರಾಟದ ಸಮಯದಲ್ಲಿ  ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಂತ  ಎಲ್ಲರಿಗೂ ಧನ್ಯವಾದಗಳು "ಎಂದಿದ್ದಾರೆ.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ನ ಸೀಟು ಹಂಚಿಕೆ ಸಂಬಂಧ ಸಭೆ ನಡೆಸಬೇಕಾಗಿದ್ದು ಪಾಸ್ವಾನ್ ಅವರ ಅನಾರೋಗ್ಯದ ಕಾರಣ ಸಭೆ ಮುಂದೂಡಲ್ಪಟ್ಟಿದೆ.

ಸೀಟು ಹಂಚಿಕೆ ಬಗ್ಗೆ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಯಲ್ಲಿ ಗೊಂದಲವಿದೆ. ಜನತಾದಳ (ಯುನೈಟೆಡ್) ಮುಖಂಡ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುವುದಾಗಿ ಗಿ ಬಿಜೆಪಿ ಈ ಹಿಂದೆ ಹೇಳಿದ್ದರೆ, ಎನ್‌ಡಿಎಯ ಮತ್ತೊಂದು ಮಿತ್ರಪಕ್ಷ ಎಲ್‌ಜೆಪಿ ಹೆಚ್ಚಿನ ಸಂಖ್ಯೆಯ ಸ್ಥಾನಗಳಿಗೆ ಒತ್ತಾಯಿಸುತ್ತಿದೆ.

ಬಿಹಾರದಲ್ಲಿ 243 ವಿಧಾನಸಭಾ ಸ್ಥಾನಗಳಿದ್ದು, ಅಕ್ಟೋಬರ್ 28, ನವೆಂಬರ್ 3, ಮತ್ತು 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಮತ ಎಣಿಕೆ ನವೆಂಬರ್ 10ಕ್ಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com