ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯ

ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ.

ಘಟನೆ ಬಗ್ಗೆ ಸಿಬಿಐ ತನಿಖೆಗೆ ಬಿಎಸ್ ಪಿ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದರು. ಆದರೆ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕೆಂದು ಆಕೆ ಬಯಸಿರುವುದಾಗಿ ಬದೌರಿಯಾ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ತನಿಖೆಗೆ ನಿಯೋಜಿಸುವುದರಿಂದ ಸಂತ್ರಸ್ತೆಯ ಪೋಷಕರು, ಸಮಾಜದಲ್ಲಿನ ಅನೇಕ ಜನರಿಗೆ ಪ್ರಾಮಾಣಿಕ ತನಿಖೆ ಬಗ್ಗೆ ಖಾತ್ರಿಯಾಗಲಿದ್ದು, ಆರೋಪಿಗಳಿಗೆ ಶಿಕ್ಷೆ ಕೊಡಿಸಬಹುದಾಗಿದೆ ಎಂದು ಬದೌರಿಯಾ ಹೇಳಿದ್ದಾರೆ.

ಹತ್ರಾಸ್ ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶದ ಜ್ವಾಲೆ ಎದಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಜನತೆ ಸಿಡಿದೆದಿದ್ದಾರೆ. ವಿಶೇಷವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರ ನಡೆಯ ಬಗ್ಗೆಯೂ ಜನತೆಯಲ್ಲಿ ಆಕ್ರೋಶ ಮಡುಗಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com