ನ.17ರಿಂದ ಬ್ರಿಕ್ಸ್ ವರ್ಚುವಲ್ ಶೃಂಗಸಭೆ: ಲಡಾಖ್‍ ಗಡಿ ಬಿಕ್ಕಟ್ಟು ಮಧ್ಯೆ ಮೋದಿ, ಕ್ಸಿ ಮುಖಾಮುಖಿ ಸಾಧ್ಯತೆ!

ಪೂರ್ವ ಲಡಾಕ್‌ನ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯ ಉದ್ದಕ್ಕೂ ಭಾರತೀಯ ಮತ್ತು ಚೀನಾದ ಯೋಧರ ನಡುವಿನ ಸಂಘರ್ಷ ನಡುವೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬ್ರಿಕ್ಸ್‌ನಲ್ಲಿ ಮುಖಾಮುಖಿಯಾಗುವ ನಿರೀಕ್ಷೆಯಿದೆ.

Published: 05th October 2020 11:07 PM  |   Last Updated: 05th October 2020 11:07 PM   |  A+A-


Narendra Modi-Xi Jinping
Posted By : Vishwanath S
Source : PTI

ನವದೆಹಲಿ: ಪೂರ್ವ ಲಡಾಕ್‌ನ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯ ಉದ್ದಕ್ಕೂ ಭಾರತೀಯ ಮತ್ತು ಚೀನಾದ ಯೋಧರ ನಡುವಿನ ಸಂಘರ್ಷ ನಡುವೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬ್ರಿಕ್ಸ್‌ನಲ್ಲಿ ಮುಖಾಮುಖಿಯಾಗುವ ನಿರೀಕ್ಷೆಯಿದೆ.

ನವೆಂಬರ್ 17ರಂದು ಐದು ರಾಷ್ಟ್ರಗಳ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುವುದು ಎಂದು ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷ ರಾಷ್ಟ್ರ ರಷ್ಯಾ ಘೋಷಿಸಿದೆ. ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ಅನ್ನು 3.6 ಶತಕೋಟಿಗೂ ಹೆಚ್ಚು ಜನರನ್ನು ಪ್ರತಿನಿಧಿಸುವ ಪ್ರಭಾವಿ ಬಣ ಎಂದು ಕರೆಯಲಾಗುತ್ತದೆ.

ಬ್ರಿಕ್ಸ್ ದೇಶಗಳು ಒಟ್ಟು ಜಿಡಿಪಿ 16.6 ಟ್ರಿಲಿಯನ್ ಡಾಲರ್ ಹೊಂದಿವೆ. ಬ್ರಿಕ್ಸ್ ರಾಷ್ಟ್ರಗಳ ನಾಯಕರ ಸಭೆಯ ವಿಷಯವೆಂದರೆ 'ಜಾಗತಿಕ ಸ್ಥಿರತೆ, ಭದ್ರತೆ ಮತ್ತು ನವೀನ ಬೆಳವಣಿಗೆಗೆ ಬ್ರಿಕ್ಸ್ ಪಾಲುದಾರಿಕೆ' ಎಂದು ರಷ್ಯಾ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಕ್ಸಿ ಇಬ್ಬರೂ ಕಳೆದ ಕೆಲವು ವರ್ಷಗಳಿಂದ ಬ್ರಿಕ್ಸ್‌ನ ಎಲ್ಲಾ ಶೃಂಗಸಭೆ ಸಭೆಗಳಲ್ಲಿ ಭಾಗವಹಿಸಿದ್ದಾರೆ. ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಮತ್ತು ಕ್ಸಿ ಭಾಗವಹಿಸುತ್ತಿದ್ದಾರೆ ಎಂದು ಬಹುಪಕ್ಷೀಯ ಕಾರ್ಯಕ್ರಮದ ವ್ಯವಸ್ಥೆಗಳಲ್ಲಿ ಭಾಗಿಯಾಗಿರುವ ರಾಜತಾಂತ್ರಿಕರೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳ ಆರಂಭದಿಂದ ಪೂರ್ವ ಲಡಾಕ್‌ ಗಡಿರೇಖೆಯಲ್ಲಿ ಚೀನಾ ಮತ್ತು ಭಾರತೀಯ ಯೋಧರ ನಡುವೆ ಸಂಘರ್ಷ ನಡೆದಿದ್ದು ಅಂದಿನಿಂದ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸುವಂತೆ ಮಾಡಿದೆ. 

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp