ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಹೆಚ್ಚಿನ ಭದ್ರತೆ: ಉತ್ತರ ಪ್ರದೇಶ ಸರ್ಕಾರ

ಸಾಮೂಹಿಕ ಅತ್ಯಾಚಾರದ ನಂತರ ಮೃತಪಟ್ಟಿರುವ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಕೆಯ ಸಹೋದರನಿಗೆ ಇಬ್ಬರು ಗನ್ನರ್ ಗಳನ್ನು ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.
ಹತ್ರಾಸ್ ಸಂತ್ರಸ್ತೆಯ ಕುಟುಂಬದವರ ಜೊತೆಗೆ ಪ್ರಿಯಾಂಕಾ ಗಾಂಧಿ ಚಿತ್ರ
ಹತ್ರಾಸ್ ಸಂತ್ರಸ್ತೆಯ ಕುಟುಂಬದವರ ಜೊತೆಗೆ ಪ್ರಿಯಾಂಕಾ ಗಾಂಧಿ ಚಿತ್ರ

ಹತ್ರಾಸ್: ಸಾಮೂಹಿಕ ಅತ್ಯಾಚಾರದ ನಂತರ ಮೃತಪಟ್ಟಿರುವ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಕೆಯ ಸಹೋದರನಿಗೆ ಇಬ್ಬರು ಗನ್ನರ್ ಗಳನ್ನು ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ಸಂತ್ರಸ್ಥೆಯ ಮನೆಯ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಆಕೆಯ ಕುಟುಂಬ ಸದಸ್ಯರಿಗೂ ಭದ್ರತೆಯನ್ನು ಒದಗಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವಾನಿಸ್ ಕುಮಾರ್ ಅವಾಸ್ತಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬಕ್ಕೆ 24 ಗಂಟೆಗಳ ಭದ್ರತೆಗಾಗಿ 12ರಿಂದ 15 ಮಂದಿ ಪ್ರಾಂತೀಯ ಸಶಸ್ತ್ರ ಕಾನ್ಸ್ ಟೇಬಲ್ ಗಳನ್ನು ನಿಯೋಜಿಸಲಾಗಿದೆ. ಅಲ್ಲಿ ಯಾವುದೇ ರೀತಿಯ ಉದ್ವಿಗ್ವತೆ ಉಂಟಾಗದಂತೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ. ಕಾನ್ಸ್ ಟೇಬಲ್ ಅಲ್ಲದೇ, ಮೂವರು ಠಾಣಾಧಿಕಾರಿಗಳು, ಉಪ ಎಸ್ ಪಿ ಮಟ್ಟದ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಪೊಲೀಸರನ್ನು ಸಹ ಗ್ರಾಮದಲ್ಲಿ ನಿಯೋಜಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಕೂಡಾ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com