ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿಯಲ್ಲಿ ಕಿರಿಯ ಸೇನಾಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಇಲ್ಲಿ ತಿಳಿಸಿವೆ.
ಭಾರತೀಯ ಸೇನೆ
ಭಾರತೀಯ ಸೇನೆ

ಜಮ್ಮು: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಅಧಿಕೃತ ಮೂಲಗಳು ಇಲ್ಲಿ ತಿಳಿಸಿವೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. 

ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು, ನಂತರ ಕೊನೆಯುಸಿರೆಳೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com