ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 2 ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

ಶೋಪಿಯಾನ್ ಜಿಲ್ಲೆಯ ಸುಗನ್ ಜೈನಪೊರಾ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 

ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆ ಸ್ಥಳವನ್ನು ಸುತ್ತುವರೆದು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com