88ನೇ ಭಾರತೀಯ ವಾಯುಪಡೆ ದಿನ: ಹಿಂಡನ್ ವಾಯುನೆಲೆಯಲ್ಲಿ ಕಳೆಕಟ್ಟಿದ ಸಂಭ್ರಮ

ಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆಯುತ್ತಿದೆ. ವಿಶೇಷ ಪರೇಡ್ ನಲ್ಲಿ ಭಾರತೀಯ ಯೋಧರು ತಮ್ಮ ಶಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. 
ಹಿಂಡನ್ ವಾಯುನೆಲೆ
ಹಿಂಡನ್ ವಾಯುನೆಲೆ

ನವದೆಹಲಿ: ಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆಯುತ್ತಿದೆ. ವಿಶೇಷ ಪರೇಡ್ ನಲ್ಲಿ ಭಾರತೀಯ ಯೋಧರು ತಮ್ಮ ಶಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. 

ಈ ವರ್ಷದ ವಿಶೇಷ ಪರೇಡ್'ನ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಆಗಿರಲಿದ್ದು, ರೋಮಾಂಚನಕಾರಿ ದೃಶ್ಯ ವೈಭವ ಎಲ್ಲರ ಕಣ್ಮನ ಸೆಳೆಯುತ್ತಿದೆ.

ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದಾರೆ. 

ಇದಕ್ಕೂ ಮುನ್ನ ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲನೆ ನಡೆಸಿದರು. 

ಭಾರತೀಯ ವಾಯುಪಡೆ ದಿನವನ್ನು ಪ್ರಥಮ ಬಾರಿಗೆ 1932, ಅಕ್ಟೋಬರ್‌ 8 ರಂದು ಆಚರಿಸಲಾಯಿತು. ಅಲ್ಲಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಭಾರತವು 87ನೇ ವರ್ಷದ ವಾಯುಪಡೆ ದಿನವನ್ನು ಆಚರಿಸುತ್ತಿದೆ.

ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್‌ ವಿಜಯ್‌, ಆಪರೇಷನ್‌ ಮೇಘದೂತ್‌, ಆಪರೇಷನ್‌ ಕ್ಯಾಕ್ಟಸ್‌, ಆಪರೇಷನ್‌ ಪೂಮಲೈ, ಆಪರೇಷನ್‌ ರಾಹತ್‌ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ.

ಇದಲ್ಲದೆ ದೇಶದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ, ಭಯೋತ್ಪಾದಕರ ದಾಳಿ ನಡೆದಾಗ, ಗಲಭೆಗಳು ನಡೆದಾಗ ಪ್ರಾಣಾಪಾಯದಲ್ಲಿರುವ ಜನರನ್ನು ರಕ್ಷಿಸುವ ಕಾರ್ಯವನ್ನೂ ವಾಯುಸೇನೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com