ಅಭಿವ್ಯಕ್ತಿ ಸ್ವಾತಂತ್ರ್ಯ ಅತಿ ಹೆಚ್ಚು ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್ 

ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 

ತಬ್ಲಿಘಿಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿದ್ದು, ತಬ್ಲಿಘಿ ಜಮಾತ್ ನ ಕಾರ್ಯಕ್ರಮದ ಕುರಿತು ಮಾಧ್ಯಮಗಳ ವರದಿಯ ಕುರಿತು ತಪ್ಪಿಸಿಕೊಳ್ಳುವ ಹಾಗೂ ನಿರ್ಲಜ್ಜ ಪ್ರಮಾಣಪತ್ರವನ್ನು ಸಲ್ಲಿಸಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರಿದ್ದ ಪೀಠ, ಜಮೈತ್ ಉಲಾಮ-ಎ-ಹಿಂದ್ ಹಾಗೂ ಇತರರು ಮಾಧ್ಯಮಗಳಲ್ಲಿ ತಬ್ಲಿಘಿ ಜಮಾತ್ ನ ಸಭೆಯ ಕುರಿತ ಕಾರ್ಯಕ್ರಮಗಳ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು.

ಈ ಬಗ್ಗೆ ಕೋರ್ಟ್ ಪ್ರತಿಕ್ರಿಯೆ ನೀಡಿ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯವನ್ನು ಅತಿ ಹೆಚ್ಚು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com