ಮಧ್ಯ ಪ್ರದೇಶ ಬಿಜೆಪಿ ಶಾಸಕರ ಪುತ್ರಿಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು

ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಯೋಪುರ: ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಶಾಸಕರ ಪುತ್ರಿ ಐದು ವರ್ಷಗಳ ಹಿಂದೆ ಶಿಯೋಪುರದ ಕರಾಹಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಾಪುರ ಗ್ರಾಮದ ಸೋನು ಆದಿವಾಸಿ ಅವರೊಂದಿಗೆ ವಿವಾಹವಾಗಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

"ಶಾಸಕ ಸೀತಾರಾಮ್ ಆದಿವಾಸಿ ಅವರ ಮಗಳು, ಪತಿ ವಿರುದ್ಧ ದೂರು ನೀಡಿದ್ದು, ದೂರಿನ ಅದರ ಆಧಾರದ ಮೇಲೆ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಮತ್ತು ಇತರ ಸಂಬಂಧಿತ ಸೆಕ್ಷೆನ್ ಅಅಡಿ, ಪತಿ, ಅತ್ತೆ ಮತ್ತು ಮಾವನ ವಿರುದ್ಧ ಕೇಸ್ ದಾಖಲಿಸಲಾಗಿದೆ" ಎಂದು ಕರಾಹಲ್ ಪೊಲೀಸ್ ಠಾಣೆಯ ಅಧಿಕಾರಿ ರಾಜೇಶ್ ಶರ್ಮಾ ತಿಳಿಸಿದ್ದಾರೆ.

ತನ್ನ ಪತಿ ಕಳೆದ ಎರಡು ವರ್ಷಗಳಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಶಾಸಕರ ಪುತ್ರಿ ದೂರಿನಲ್ಲಿ ಆರೋಪಿಸಿರುವುದಾಗಿ ಶರ್ಮಾ ಹೇಳಿದ್ದಾರೆ.

ಪತಿ ತನ್ನಿಂದ ಬೈಕು ಮತ್ತು ಹಣಕ್ಕೆ ಬೇಡಿಕೆಯಿಟ್ಟಿದ್ದರು. ಒಂದು ವೇಳೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮನೆಯಲ್ಲಿ ಇರಲು ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಶಾಸಕರ ಪುತ್ರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com