ಪ.ಬಂಗಾಳ ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ; ಕೇಸರಿ ಕೇಡರ್‌ನಿಂದ ಬಂದೂಕು ವಶಕ್ಕೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.

Published: 08th October 2020 03:30 PM  |   Last Updated: 08th October 2020 03:35 PM   |  A+A-


west-bengal1

ಬಿಜೆಪಿ ಕಾರ್ಯಕರ್ತರು

Posted By : Lingaraj Badiger
Source : The New Indian Express

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಪಕ್ಷದ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಮತ್ತು ಸಂಸದ ಜ್ಯೋತಿರ್ಮೊಯ್ ಸಿಂಗ್ ಮಹತೋ ಅವರು ಗಾಯಗೊಂಡಿದ್ದಾರೆ.

ಬಿಜೆಪಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ನಾಲ್ಕು ಪ್ರಮುಖ ರ್ಯಾಲಿಗಳನ್ನು ಆಯೋಜಿಸಿದ್ದು, ಕೋಲ್ಕತಾ ಮತ್ತು ಹೌರಾದಿಂದ ತಲಾ ಎರಡು ಪ್ರತಿಭಟನಾ ರ್ಯಾಲಿಗಳು ರಾಜ್ಯ ಸಚಿವಾಲಯ ನಬಣ್ಣಾ ಕಡೆಗೆ ಸಾಗಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp