2020ನೇ ವರ್ಷವನ್ನು ಪರೀಕ್ಷೆರಹಿತ ವರ್ಷ ಎಂದು ಘೋಷಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಪರೀಕ್ಷೆರಹಿತ ವರ್ಷವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷವನ್ನು ಪರೀಕ್ಷೆರಹಿತ ವರ್ಷವೆಂದು ಘೋಷಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ.

2020 ಜೀವ ಉಳಿಸುವ ವರ್ಷವಾಗಿದೆ, ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ನಡೆಸೋಣ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅದರಂತೆ ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ಮಾಡೋಣ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭ ಮಾಡುವುದು ಬೇಡ. ಆದರೆ ಆನ್ ಲೈನ್ ಕ್ಲಾಸ್ ಮುಂದುವರಿಸಬೇಕು. ರಾಜ್ಯ ಸೇರಿ ದೇಶಾದ್ಯಂತ ಶಿಕ್ಷಕರ ಸಾವು ಸಂಭವಿಸುತ್ತಿದೆ. ಶಿಕ್ಷಕರು ದೇಶದ ಆಸ್ತಿ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಸ್ಥಿತಿಯಲ್ಲಿಲ್ಲ. ಮಕ್ಕಳನ್ನು ಖಾಯಿಲೆ ಅಥವ ಸಮಸ್ಯೆಗೆ ದೂಡುವ ಮನಸ್ಥಿತಿಯಲ್ಲಿಲ್ಲ ಎಂದರು.

ರಾಜ್ಯ ಸರ್ಕಾರ ಶಿಕ್ಷಕರ ಬಗ್ಗೆಯೂ ಕಾಳಜಿ ವಹಿಸಬೇಕು, ಶಿಕ್ಷಕರ ರಕ್ಷಣೆ, ಜೀವ ಉಳಿಸಲು ಆದ್ಯತೆ ನೀಡಬೇಕು ಎಂದು ಸಂಸದೆ ಶೋಭಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com