ಬಿಹಾರ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕಿರಾತಕರು

ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. 

Published: 12th October 2020 01:47 PM  |   Last Updated: 12th October 2020 01:47 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : ANI

ಬಿಹಾರ: ಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯಲ್ಲಿ ಮತ್ತೋರ್ವ ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. 

ಐದು ವರ್ಷದ ಮಗುವನ್ನು ಕಾಲುವೆಗೆ ಎಸೆದಿದ್ದರಿಂದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬನನ್ನು ಈಗಾಗಲೇ ಬಂಧಿಸಲಾಗಿದೆ. ಇಬ್ಬರನ್ನು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಪಾಟ್ನಾದಿಂದ 135 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಕೆ.ಕೆ.ಸಿಂಗ್ ಹೇಳಿದ್ದಾರೆ 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp