ದೆಹಲಿಯಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 1849 ಹೊಸ ಪ್ರಕರಣ ದಾಖಲು!

ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿದ್ದ ದೆಹಲಿಯಲ್ಲಿ ಕ್ರಮೇಣ ಸೋಂಕು ತಹಬದಿಗೆ ಬಂದಿದ್ದು, ಇಂದು ದೆಹಲಿಯಲ್ಲಿ 1849 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿದ್ದ ದೆಹಲಿಯಲ್ಲಿ ಕ್ರಮೇಣ ಸೋಂಕು ತಹಬದಿಗೆ ಬಂದಿದ್ದು, ಇಂದು ದೆಹಲಿಯಲ್ಲಿ 1849 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,11,188ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ದೆಹಲಿಯಲ್ಲಿ 2975 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಗುಣಮುಖರ ಸಂಖ್ಯೆ 2,84,844ಕ್ಕೆ ಏರಿಕೆಯಾಗಿದೆ.

ಇಂದು ದೆಹಲಿಯಲ್ಲಿ 40 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಕೊರೋನಾದಿಂದಾಗಿ 5809 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಅಂತೆಯೇ ದೆಹಲಿಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 20,535ಕ್ಕೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com