ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಎಂಟು ಎನ್‍ಕೌಂಟರ್, 18 ಉಗ್ರರು ಹತ: ಡಿಜಿಪಿ ದಿಲ್ಬಾಗ್ ಸಿಂಗ್

ಜಮ್ಮು-ಕಾಶ್ಮೀರ ರಾಜ್ಯದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎಂಟು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ದಿಲ್ಬಾಗ್ ಸಿಂಗ್
ದಿಲ್ಬಾಗ್ ಸಿಂಗ್

ಶ್ರೀನಗರ: ಜಮ್ಮು-ಕಾಶ್ಮೀರ ರಾಜ್ಯದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ 9 ತಿಂಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎಂಟು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು, ಲಷ್ಕರ್-ಎ-ತೋಯಿಬಾ (ಎಲ್‍ಇಟಿ) ಶ್ರೀನಗರದಲ್ಲಿ ನೆಲೆಯೂರಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಆದರೆ, ಶ್ರೀನಗರದಲ್ಲಿ ನೆಲೆ ಸ್ಥಾಪಿಸುವ ಮೊದಲೇ ಉಗ್ರರನ್ನು ಪತ್ತೆ ಹಚ್ಚಿ ಅವರನ್ನು ನಿರ್ಮೂಲನೆಗೊಳಿಸಲು ಭದ್ರತಾ ಪಡೆಗಳಿಗೆ ಸಾಧ್ಯವಾಗಿದೆ. ಮೊದಲ ಬಾರಿಗೆ ಶ್ರೀನಗರದಲ್ಲಿ 9 ತಿಂಗಳಲ್ಲಿ ಎಂಟು ಗುಂಡಿನ ಚಕಮಕಿಗಳು ನಡೆದಿವೆ. ಈ ವರ್ಷ ಇಲ್ಲಿಯವರೆಗೆ ಗುಂಡಿನ ಚಕಮಕಿಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಉಗ್ರರು ಮುಕ್ತವಾಗಿ ಸಂಚರಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎಲ್‍ಇಟಿ ನಗರದಲ್ಲಿ ಹೆಜ್ಜೆ ಇಡಲು ಪ್ರಯತ್ನಿಸುತ್ತಿದೆ. ಆದರೆ ಪೊಲೀಸ್ ಜಾಲ ಸಮರ್ಥವಾಗಿದೆ. ಉಗ್ರರು ನಗರದಲ್ಲಿ ನೆಲೆಯೂರಲು ಪ್ರಯತ್ನಿಸಿದಾಗಲೆಲ್ಲಾ, ಸೇನೆ ಅವರನ್ನು ನಿರ್ಮೂಲನೆ ಮಾಡುತ್ತಿದೆ. ಉಗ್ರರು ನಗರದೊಳಗೆ ಬರುವುದನ್ನು ತಡೆಯಲಾಗುತ್ತಿದೆ. ಏಕೆಂದರೆ ಶ್ರೀನಗರಕ್ಕೆ ಬರುವ ಪ್ರತಿಯೊಬ್ಬರನ್ನೂ ಯಂತ್ರದ ಮೂಲಕ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com