ಕೃಷಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅನುಮೋದನೆ ಪಡೆದುಕೊಂಡ ಮೂರು ಕೃಷಿ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅನುಮೋದನೆ ಪಡೆದುಕೊಂಡ ಮೂರು ಕೃಷಿ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ನೊಟೀಸ್ ನಲ್ಲಿ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

ಛತ್ತೀಸ್ ಗಢದ ಕಿಸಾನ್ ಕಾಂಗ್ರೆಸ್ ನಾಯಕ ರಾಕೇಶ್ ವೈಶ್ನವ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದೆ.

ಕೃಷಿ ಮಸೂದೆಯ ಮೌಲ್ಯವನ್ನು ಪ್ರಶ್ನಿಸಿ ಅಡ್ವೊಕೇಟ್ ಎಂ ಎಲ್ ಶರ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಲು ಮಾತ್ರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com