ಕೊರೋನಾ ಆರ್ಭಟ
ಕೊರೋನಾ ಆರ್ಭಟ

ಕೋವಿಡ್-19: ತಮಿಳುನಾಡಿನಲ್ಲಿ ಇಂದು 4,879 ಹೊಸ ಸೋಂಕು ಪ್ರಕರಣಗಳು ಪತ್ತೆ!

ನೆರೆಯ ತಮಿಳುನಾಡಿನಲ್ಲಿ ಇಂದು 4,879 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಇಂದು 4,879 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು ತಮಿಳುನಾಡಿನಾದ್ಯಂತ ಒಟ್ಟು 4,879 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 6,61,264ಕ್ಕೆ ಏರಿಕೆಯಾಗಿದೆ. 

ಇನ್ನು ಇಂದು ತಮಿಳುನಾಡಿನಾದ್ಯಂತ 5,165 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 6,07,203ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಈ ರಾಜ್ಯದಲ್ಲಿ 43,747 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತೆಯೇ ಇಂದು 62  ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 10,314ಕ್ಕೆ ಏರಿಕೆಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com