ಬಿಜೆಪಿ-ಕಾಂಗ್ರೆಸ್
ಬಿಜೆಪಿ-ಕಾಂಗ್ರೆಸ್

ಮಧ್ಯ ಪ್ರದೇಶ: ನೀತಿ ಸಂಹಿತೆ ಉಲ್ಲಂಘಿಸಿದ 14 ಸಚಿವರನ್ನು ವಜಾಗೊಳಿಸುವಂತೆ ಕಾಂಗ್ರೆಸ್ ಆಗ್ರಹ

ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಸಚಿವ ಸ್ಥಾನಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ರಾಜ್ಯ ಬಿಜೆಪಿ ಸರ್ಕಾರದ 14 ಸಚಿವರನ್ನು ವಜಾಗೊಳಿಸಬೇಕು ಮಧ್ಯಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಭೋಪಾಲ್: ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಸಚಿವ ಸ್ಥಾನಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ರಾಜ್ಯ ಬಿಜೆಪಿ ಸರ್ಕಾರದ 14 ಸಚಿವರನ್ನು ವಜಾಗೊಳಿಸಬೇಕು ಮಧ್ಯಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಕಾಂಗ್ರೆಸ್ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಡಳಿತಾರೂಢ ಬಿಜೆಪಿ, ತನ್ನ ಯಾವುದೇ ಅಭ್ಯರ್ಥಿಗಳು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಅಥವಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ.

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ಮತ್ತು ಅವರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ 14 ಸಚಿವರು ಈ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಈ 14 ಸಚಿವರು ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮಧ್ಯಪ್ರದೇಶ ಕಾಂಗ್ರೆಸ್ ಘಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com