'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'

ಕುರಿ ಮತ್ತು ಮೇಕೆ ನಡುವೆ ವ್ಯತ್ಯಾಸ ಗೊತ್ತಿಲ್ಲದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕೃಷಿ ಮಸೂದೆ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೇವಡಿ ಮಾಡಿದ್ದಾರೆ.
ರಾಹುಲ್ ಮತ್ತು ಪ್ರಿಯಾಂಕಾ
ರಾಹುಲ್ ಮತ್ತು ಪ್ರಿಯಾಂಕಾ

ನವದೆಹಲಿ: ಕುರಿ ಮತ್ತು ಮೇಕೆ ನಡುವೆ ವ್ಯತ್ಯಾಸ ಗೊತ್ತಿಲ್ಲದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕೃಷಿ ಮಸೂದೆ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೇವಡಿ ಮಾಡಿದ್ದಾರೆ.

ರಾಹುಲ್ ಮತ್ತು ಪ್ರಿಯಾಂಕಾಗೆ ಹೊಲದಲ್ಲಿ ಬೆಳೆದಿರುವ ಬೆಳೆಯ ಎಲೆಗಳನ್ನು ನೋಡಿ ಅದು ಯಾವುದೆಂದು ಗುರುತಿಸಲು ಸಾಧ್ಯವಿಲ್ಲ. ಒಂದು ವೇಳೆ ಸರಿಯಾಗಿ ಗುರುತಿಸಿದರೆ ನಾನು ರಾಜಕಾರಣದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು  ಶೇಖಾವತ್ ಸವಾಲು ಹಾಕಿದ್ದಾರೆ. ಕೃಷಿ ಕಾಯ್ದೆ ವಿರೋಧಿಸಿ ರಾಹುಲ್ ಗಾಂಧಿ ಪಂಜಾಬಿನಲ್ಲಿ 'ಖೇತಿ ಬಚಾವೊ ಯಾತ್ರೆ' ನಡೆಸಿದ್ದರು. ಎಪಿಎಂಸಿ ಕಾಯಿದೆ ಮತ್ತು ಕೃಷಿ ಕಾಯಿದೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು.

ಕೃಷಿ ಮಸೂದೆ ವಿಚಾರದಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ರೈತರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಮತ್ತು ಪ್ರಿಯಾಂಕಾಗೆ ಮೇಕೆ ಮತ್ತು ಕುರಿ ನಡುವಿನ ವ್ಯತ್ಯಾಸ ಹೇಳಲು ಗೊತ್ತಿಲ್ಲ,, ತಿಳಿದುಕೊಳ್ಳದೆ ಕೃಷಿ ಮಸೂದೆ ವಿಚಾರದಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮೇಲೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಾಗ್ದಾಳಿ ಮಾಡಿದ್ದಾರೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com