ಕೇರಳದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, ಒಂದೇ ದಿನ 8,764 ಮಂದಿಗೆ ಸೋಂಕು, 21 ಸಾವು

ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ 8,764ಮಂದಿಗೆ ಸೋಂಕು ಒಕ್ಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊಚ್ಚಿ: ದೇಶದಲ್ಲಿ ಮೊಟ್ಟ ಮೊದಲ ಕೊರೋನಾ ಸೋಂಕು ಪತ್ತೆಯಾಗಿದ್ದ ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ 8,764ಮಂದಿಗೆ ಸೋಂಕು ಒಕ್ಕರಿಸಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 8,764 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,01,896ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,723 ಮಂದಿ ಸೋಂಕಿತರು  ಗುಣಮುಖರಾಗಿದ್ದಾರೆ.  ಒಟ್ಟಾರೆ ಸೋಂಕಿತರ ಪೈಕಿ 95,407 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 2,07,357 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಇಂದು ಒಂದೇ ದಿನ 21 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಈ ವರೆಗೂ ಕೊರೋನಾ  ಸೋಂಕಿಗೆ ಬಲಿಯಾದವರ ಸಂಖ್ಯೆ 1,046ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಈ ವರೆಗೂ 36,76,682 ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com