ಕೋವಿಡ್-19: ಭಾರತದಲ್ಲಿ ಒಂದೇ ದಿನ 63,509 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 72 ಲಕ್ಷ, 1,10,586 ಮಂದಿ ಸಾವು

ದೇಶದಲ್ಲಿ ಒಂದೇ ದಿನ 63,509 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 72 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿ ಒಂದೇ ದಿನ 63,509 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 72 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ 63,509 ಜನರಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 72,39,390ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 730 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,10,586ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಒಟ್ಟು 72,39,390 ಮಂದಿ ಸೋಂಕಿತರ ಪೈಕಿ ಈ ವರೆಗೂ 63,01,928 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾರತದಲ್ಲಿನ್ನೂ 8,26,876 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com