ದೇಶಾದ್ಯಂತ 24 ಗಂಟೆಗಳಲ್ಲಿ 11,45,015 ಕೋವಿಡ್-19 ಪರೀಕ್ಷೆ, ಒಟ್ಟು 9 ಕೋಟಿ ಪರೀಕ್ಷೆ: ಆರೋಗ್ಯ ಇಲಾಖೆ

ಭಾರತದಲ್ಲಿ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 9 ಕೋಟಿ ದಾಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,45,015 ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್-19
ಕೋವಿಡ್-19

ನವದೆಹಲಿ: ಭಾರತದಲ್ಲಿ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 9 ಕೋಟಿ ದಾಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,45,015 ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,45,015 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ಈ ವರೆಗೂ ಭಾರತದಲ್ಲಿ ಒಟ್ಟಾರೆ 9,00,90,122 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಸ್ಥಾಪನೆ ಮಾಡಲಾಗಿರುವ 1,935 ಲ್ಯಾಬ್‌ ಗಳಲ್ಲಿ ಪ್ರತಿನಿತ್ಯ ಕನಿಷ್ಠ15 ಲಕ್ಷ ಕೋವಿಡ್ ಪರೀಕ್ಷೆ ನಡೆಸುವ ಸಾಮರ್ಥ್ಯವನ್ನು ಹೊಂದಲಾಗಿದೆ. ಈ ಪೈಕಿ 1,112 ಸರ್ಕಾರಿ ಪ್ರಯೋಗಾಲಯಗಳಾಗಿದ್ದು, 823 ಖಾಸಗಿ ಪ್ರಯೋಗಾಲಯಗಳಾಗಿವೆ. ಮುಂದಿನ ದಿನಗಳಲ್ಲಿ ಈ ಸಾಮರ್ಥ್ಯವನ್ನು ಮತ್ತಷ್ಟು  ಹೆಚ್ಚಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಪ್ರಸ್ತುತ, ಸಕ್ರಿಯ ಪ್ರಕರಣಗಳ ಸಂಖ್ಯೆ 8,26,876 ರಷ್ಟಿದ್ದು, ದೇಶದ ಒಟ್ಟು ಸಕಾರಾತ್ಮಕ ಪ್ರಕರಣ ಪ್ರಮಾಣ 11.42 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 74,632 ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ಹೊಸ ಸೋಂಕಿತರ ಸಂಖ್ಯೆ 63,509ರಷ್ಟಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ 87.05 ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com