ಗಡಿಯಲ್ಲಿ ಮತ್ತೆ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ, ಶೆಲ್ಲಿಂಗ್ ದಾಳಿಯಲ್ಲಿ ಭಾರತದ ಸೇನಾಧಿಕಾರಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಮುಂದುವರೆದಿದ್ದು, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಮುಂದುವರೆದಿದ್ದು, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಸುಂದರ್ ಬನಿ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಪಾಕಿಸ್ತಾನದ ಶೆಲ್ಲಿಂಗ್ ನಲ್ಲಿ ಭಾರತದ ಸೇನಾಧಿಕಾರಿ ಗಾಯಗೊಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಪ್ರಸ್ತುತ ಅವರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಪಾಕಿಸ್ತಾನದ ಉದ್ಧಟತನಕ್ಕೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರ ನೀಡುತ್ತಿದ್ದು, ಭಾರತೀಯ ಸೈನಿಕರೂ ಕೂಡ ಶೆಲ್ ದಾಳಿಯಲ್ಲಿ ನಿರತರಾಗಿದ್ದಾರೆ.

ಈ ತಿಂಗಳಿನಲ್ಲಿ ಪಾಕಿಸ್ತಾನದ ಸೇನೆ 17ನೇ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಆಕ್ಟೋಬರ್ 1ರಂದು ಪೂಂಚ್ ಜಿಲ್ಲೆಯ ಕೃಷ್ಣಘಾಟಿ ಸೆಕ್ಟರ್ ನಲ್ಲಿ ನಡೆದಿದ್ದ ದಾಳಿಯಲ್ಲಿ ಓರ್ವ ಸೈನಿಕ ಸಾವನ್ನಪ್ಪಿ, ಮತ್ತೋರ್ವ ಸೈನಿಕ ಗಾಯಗೊಂಡಿದ್ದರು. ಅಂತೆಯೇ ಸೆಪ್ಟೆಂಬರ್ 5ರಂದು ಇದೇ ಸುಂದರ್ ಬನಿ ಸೆಕ್ಟರ್  ನಲ್ಲಿ ನಡೆದಿದ್ದ ದಾಳಿಯಲ್ಲಿ ಓರ್ವ ಸೈನಿಕ ಸಾವನ್ನಪ್ಪಿ ಓರ್ವ ಸೇನಾಧಿಕಾರಿ ಸೇರಿದಂತೆ ಇಬ್ಬರು ಸೈನಿಕರು ಗಾಯಗೊಂಡಿದ್ದರು. ಸೆಪ್ಟೆಂಬರ್ 2ರಂದು ಕೆರಿ ಸೆಕ್ಟರ್ ನಲ್ಲಿ ನಡೆದ ದಾಳಿಯಲ್ಲಿ ಜೆಸಿಒ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com