ತೆಲಂಗಾಣ, ಹೈದರಾಬಾದ್ ನಲ್ಲಿ ಧಾರಾಕಾರ ಮಳೆ: ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆ

ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದ್ದು ಜನರ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ.

Published: 15th October 2020 08:30 AM  |   Last Updated: 15th October 2020 12:22 PM   |  A+A-


A man tries to hold on to a tyre to save himself from getting washed away in Falaknuma on Wednesday. He is yet to be traced

ಫಲಕ್ನುಮಾದಲ್ಲಿ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದಾಗ ಟೈರ್ ಹಿಡಿದು ರಕ್ಷಿಸಿಕೊಳ್ಳಲು ನೋಡುತ್ತಿರುವ ವ್ಯಕ್ತಿ. ಈ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ.

Posted By : Sumana Upadhyaya
Source : The New Indian Express

ಹೈದರಾಬಾದ್: ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದ್ದು ಜನರ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಮಳೆ, ಪ್ರವಾಹ ವಿಕೋಪಕ್ಕೆ ಇದುವರೆಗೆ ಮೃತಪಟ್ಟವರ ಸಂಖ್ಯೆ 32ಕ್ಕೇರಿದ್ದು, ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದಾರೆ. ಮಹಬೂಬ್ ನಗರ ಜಿಲ್ಲೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.

ತೀವ್ರ ಮಳೆಗೆ ಮನೆಗಳ ಗೋಡೆ ಕುಸಿದು, ವಿದ್ಯುತ್ ಪ್ರವಹಿಸಿ ಮತ್ತು ಕಾಲುವೆಗಳಲ್ಲಿ ಕೊಚ್ಚಿಹೋಗಿ ಹೈದರಾಬಾದ್ ನ ಹೊರವಲಯಗಳಲ್ಲಿ 9 ಮಂದಿ ಕಾಣೆಯಾಗಿದ್ದಾರೆ. ಗಂಗನ್ ಪಹಾಡ್ ನಲ್ಲಿ ಮೂವರು ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ಮೈಲಾರ್ದೇವಪಲ್ಲಿಯಲ್ಲಿ ಇಬ್ಬರು ಇದೇ ರೀತಿ ಕಾಣೆಯಾಗಿದ್ದಾರೆ. ಬಂಜಾರಾ ಹಿಲ್ಸ್ ನಲ್ಲಿ ವೈದ್ಯರೊಬ್ಬರ ಮೇಲೆ ವಿದ್ಯುತ್ ಪ್ರವಹಿಸಿ ನೀರಿನಲ್ಲಿ ಕೊಚ್ಚಿ ಹೋದರೆ ದಿಲ್ಸುಕ್ ನಗರದಲ್ಲಿ ಮೂರು ವರ್ಷದ ಮಗು ಅಪಾರ್ಟ್ ಮೆಂಟ್ ನಲ್ಲಿ ನೀರು ನುಗ್ಗಿ ಕೊಚ್ಚಿ ಹೋಗಿದ್ದಾಳೆ.

ಚಂದ್ರಯಾನಗುಟ್ಟದಲ್ಲಿ ಕಳೆದ ಮಂಗಳವಾರ ರಾತ್ರಿ ಬಂಡೆಯೊಂದು ಮನೆಗೆ ಅಪ್ಪಳಿಸಿ ಗೋಡೆ ಕುಸಿದುಬಿದ್ದು 8 ಮಂದಿ ಮೃತಪಟ್ಟಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಪೌರಾಡಳಿತ ಸಚಿವ ಕೆ ಟಿ ರಾಮ ರಾವ್ ಪರಿಸ್ಥಿತಿಯನ್ನು ನಿಗಾವಹಿಸುತ್ತಿದ್ದು, ಜನರ ಸಂಕಷ್ಟಕ್ಕೆ ಧಾವಿಸುವಂತೆ ಸಂಬಂಧಪಟ್ಟ ಆಡಳಿತಾಧಿಕಾರಿಗಳಿಗೆ ಸೂಚಿಸುತ್ತಿದ್ದಾರೆ.

ಎನ್ ಡಿಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ: ರಾಷ್ಟ್ರೀಯ ವಿಪತ್ತು ಪರಿಹಾರ ತಂಡ(ಎನ್ ಡಿಆರ್ ಎಫ್) ಹೈದರಾಬಾದ್ ನಲ್ಲಿ ಸದ್ಯ ರಕ್ಷಣಾ ಕಾರ್ಯ ಮುಂದುವರಿದಿದೆ.

Stay up to date on all the latest ರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp