ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ  67,708 ಹೊಸ ಕೇಸ್ ಪತ್ತೆ, 680 ಸಾವು

ದೇಶದಲ್ಲಿ ಒಂದೇ ದಿನ 67,708 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 73 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮುಂಬೈಯ ಆಸ್ಪತ್ರೆಯೊಂದರ ಸ್ವಾಬ್ ಟೆಸ್ಟ್ ಕ್ಯಾಬಿನ್ ಸಮೀಪ ವೈದ್ಯಾಧಿಕಾರಿಗಳು
ಮುಂಬೈಯ ಆಸ್ಪತ್ರೆಯೊಂದರ ಸ್ವಾಬ್ ಟೆಸ್ಟ್ ಕ್ಯಾಬಿನ್ ಸಮೀಪ ವೈದ್ಯಾಧಿಕಾರಿಗಳು

ನವದೆಹಲಿ: ದೇಶದಲ್ಲಿ ಒಂದೇ ದಿನ 67,708 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 73 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 67,708 ಜನರಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 73,07,098ಕ್ಕೇರಿದೆ. ಒಂದೇ ದಿನ 680 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,11,266ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು 73,07,098 ಮಂದಿ ಸೋಂಕಿತರ ಪೈಕಿ ಈ ವರೆಗೂ 63,83,442 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಭಾರತದಲ್ಲಿನ್ನೂ 8,12,390 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ಪರೀಕ್ಷೆ: ನಿನ್ನೆ ಒಂದೇ ದಿನ ದೇಶದಲ್ಲಿ 11,36,183 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ನಿನ್ನೆಯವರೆಗೆ ದೇಶದಲ್ಲಿ ಇದುವರೆಗೆ 9 ಕೋಟಿಯ 12 ಲಕ್ಷದ 26 ಸಾವಿರದ 305 ಮಂದಿಯನ್ನು ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com