ಪಬ್ ಜಿ ಗೇಮ್ ಆಡುವ ವೇಳೆ ಆನ್ ಲೈನ್ ನಲ್ಲಿ ಸ್ನೇಹ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

Published: 15th October 2020 03:03 PM  |   Last Updated: 15th October 2020 03:03 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : PTI

ಭೂಪಾಲ್: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಪಬ್ ಜಿ ಗೇಮ್ ಅಡುವಾಗ ಆನ್ ಲೈನ್ ಮೂವರು ಬಾಲಕಿಗೆ ಸ್ನೇಹಿತರಾಗಿದ್ದರು. ಕಳೆದ ತಿಂಗಳು ಬಾಲಕಿಯನ್ನು ರಂಭಾನಗರಕ್ಕೆ ಕರೆಸಿಕೊಂಡ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದರು.

ಅತ್ಯಾಚಾರದ ವಿಷಯವನ್ನು ಬಹಿರಂಗ ಪಡಿಸಿದರೇ ವಿಡಿಯೋವನ್ನು ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಬಂಧಿತ ಮೂವರು ಆರೋಪಿಗಳು 18 ರಿಂದ 19 ವರ್ಷದವರಾಗಿದ್ದು, ರಂಭಾ ನಗರದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳು ಪದೇ ಪದೇ ಆಕೆ ಮೇಲೆ ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಅನ್ವಯ ಮೂವರನ್ನು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ, ಸೆಕ್ಷನ್ 376 ರ ಅಡಿಯಲ್ಲಿ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp