ಕೋವಿಡ್-19: ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್ ಗಢ, ಪ.ಬಂಗಾಳಕ್ಕೆ ಕೇಂದ್ರ ತಂಡ ನಿಯೋಜನೆ

ಕೋವಿಡ್ -19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.
ಕೋವಿಡ್-19
ಕೋವಿಡ್-19

ನವದೆಹಲಿ: ಕೋವಿಡ್ -19 ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಕರ್ನಾಟಕ, ಕೇರಳ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

ಕಂಟೈನ್ ಮೆಂಟ್ ಜೋನ್, ಕಣ್ಗಾವಲು, ಪರೀಕ್ಷೆ, ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳು ಮತ್ತು ಪಾಸಿಟಿವ್ ಪ್ರಕರಣಗಳ ಸಮರ್ಥ ವೈದ್ಯಕೀಯ ನಿರ್ವಹಣೆಗೆ ಕೇಂದ್ರ ತಂಡ ರಾಜ್ಯಗಳಿಗೆ ನೆರವು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

"ಕೊರೋನಾಗೆ ಸಮಯೋಚಿತ ಚಿಕಿತ್ಸೆ ಮತ್ತು ಇತರೆ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ರಾಜ್ಯಗಳಿಗೆ ಕೇಂದ್ರ ತಂಡಗಳು ಮಾರ್ಗದರ್ಶನ ನೀಡುತ್ತವೆ" ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರತಿ ತಂಡವು ಜಂಟಿ ಕಾರ್ಯದರ್ಶಿ(ಆಯಾ ರಾಜ್ಯದ ನೋಡಲ್ ಅಧಿಕಾರಿ), ಸಾರ್ವಜನಿಕ ಆರೋಗ್ಯ ಅಂಶಗಳನ್ನು ನೋಡಿಕೊಳ್ಳಲು ಒಬ್ಬ ಸಾರ್ವಜನಿಕ ಆರೋಗ್ಯ ತಜ್ಞರು, ಸೋಂಕು ತಡೆಗಟ್ಟುವ ಸಂಬಂಧ ಒಬ್ಬ ವೈದ್ಯ ಮತ್ತು ರಾಜ್ಯವು ಅನುಸರಿಸುತ್ತಿರುವ ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಅನ್ನು ಒಳಗೊಂಡಿರುತ್ತದೆ.

ಕರ್ನಾಟಕದಲ್ಲಿ ಇದುವರೆಗೆ 7,43,848 ಪ್ರಕರಣಗಳ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಇದು ಪ್ರತಿ ಮಿಲಿಯನ್ ಜನಸಂಖ್ಯೆಗೆ 11,010 ಪ್ರಕರಣಗಳನ್ನು ಹೊಂದಿದೆ. ಅಲ್ಲದೆ, ರಾಜ್ಯದಲ್ಲಿ 6,20,008 ಕೊರೋನಾ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com