ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಗೆ ಕೊರೋನಾ ಸೋಂಕು

ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆಜಾದ್ ಈಗ ತಾವು ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಗುಲಾಮ್ ನಬಿ ಆಜಾದ್
ಗುಲಾಮ್ ನಬಿ ಆಜಾದ್

ನವದೆಹಲಿ: ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆಜಾದ್ ಈಗ ತಾವು ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

71 ವರ್ಷದ ಕಾಂಗ್ರೆಸ್ ಮುಖಂಡ ಆಜಾದ್ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಇತ್ತೀಚಿನ ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ ಸಂಪರ್ಕತಡೆ ಹಾಗೂ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ಹಾಗೂ ಕೊರೋನಾ  ಪ್ರೋಟೋಕಾಲ್ ಗಳನ್ನು  ಅನುಸರಿಸಲು ಮನವಿ ಮಾಡೀದ್ದಾರೆ.

"ನಾನು ಕೋವಿಡ್ -19 ಗಾಗಿ ಧನಾತ್ಮಕ ವರದಿ ಪಡೆದಿದ್ದೇನೆ. ನಾನೀಗ ಹೋಂ ಕ್ವಾರಂಟೈನ್ ನಲ್ಲಿದ್ದೇನೆ.  ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿರಿ" ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಮೋತಿಲಾಲ್ ವೊರಾ ಮತ್ತು ಅಭಿಷೇಕ್ ಮನು ಸಿಂಘ್ವಿ ಕೋವಿಡ್ -19 ಸೋಂಕಿಗೆ ಒಳಗಾಗಿದ್ದರು.ಇವರ ಪೈಕಿ ಸಿಂಘ್ವಿ ಚೇತರಿಸಿಕೊಂಡಿದ್ದರೆ ಇತರೆ ನಾಯಕರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com