ಬಿಹಾರ ಚುನಾವಣೆ: ಎಲ್ ಜೆಪಿ ಗೊಂದಲ ಸೃಷ್ಟಿಸುತ್ತಿದೆ - ಮಾಜಿ ಮಿತ್ರ ಪಕ್ಷದ ವಿರುದ್ಧ ಬಿಜೆಪಿ ವಾಗ್ದಾಳಿ

ತನ್ನ ಮಾಜಿ ಎನ್‌ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಸುಳ್ಳುಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ.
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್

ಪಾಟ್ನಾ: ತನ್ನ ಮಾಜಿ ಎನ್‌ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಸುಳ್ಳುಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ.

ಪಾಸ್ವಾನ್ ಅವರು ಕೇಸರಿ ಪಕ್ಷದ ಹಿರಿಯ ನಾಯಕರೊಂದಿಗಿನ ಸಂಬಂಧವನ್ನು ಪ್ರಸ್ತಾಪಿಸುವ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಬಿಜೆಪಿಗೂ ಎಲ್ ಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೆಲವು ಬಿಜೆಪಿ ನಾಯಕರನ್ನು ಹಾಡಿ ಹೊಗಳಿದ್ದ ಚಿರಾಗ್ ಪಾಸ್ವಾನ್ ಅವರು, ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

"ನಮಗೆ ಎಲ್ ಜೆಪಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಗೊಂದಲವನ್ನು ಸೃಷ್ಟಿಸುವ ರಾಜಕೀಯವನ್ನು ನಾವು ಇಷ್ಟಪಡುವುದಿಲ್ಲ" ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಸೇರಿದಂತೆ ಇತರ ಹಿರಿಯ ಬಿಜೆಪಿ ನಾಯಕರು ಸಹ ಪಿಸ್ವಾನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ ಫೆಬ್ರವರಿಯಲ್ಲಿ ಇದೇ ಚಿರಾಗ್ ಪಿಸ್ವಾನ್ ಅವರು ಬಿಹಾರ ಸರ್ಕಾರವನ್ನು ಹೊಗಳಿದ್ದರು ಮತ್ತು ಎಲ್ ಜೆಪಿ "ಸುಳ್ಳಿನ ರಾಜಕೀಯ" ಮಾಡುತ್ತಿದೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com