ಕೃಷಿ ತ್ಯಾಜ್ಯಕ್ಕೆ ಬೆಂಕಿ ತಡೆಯುವ ಏಕಸದಸ್ಯ ಸಮಿತಿಗೆ ನಿವೃತ್ತ ನ್ಯಾ. ಮದನ್ ಬಿ ಲೋಕೂರ್ ನೇಮಕ

ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು,
ಮದನ್ ಬಿ ಲೋಕೂರ್
ಮದನ್ ಬಿ ಲೋಕೂರ್

ನವದೆಹಲಿ: ದೆಹಲಿ– ರಾಷ್ಟ್ರ ರಾಜಧಾನಿ ಪ್ರದೇಶದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಲು ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ಏಕ ಸದಸ್ಯ ಸಮಿತಿ ರಚಿಸಿದ್ದು, ಅದಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಅವರನ್ನು ನೇಮಕ ಮಾಡಿದೆ.

ದೆಹಲಿ ಮತ್ತು ಪರಿಸರ ಮಾಲಿನ್ಯ(ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಪ್ರಾಧಿಕಾರದ ಎಲ್ಲ ಅಧಿಕಾರಿಗಳು ನ್ಯಾಯಮೂರ್ತಿ ಲೋಕೂರ್ ಸಮಿತಿಗೆ ವರದಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಆದೇಶಿಸಿದೆ.

ಲೋಕೂರ್ ಸಮಿತಿಗೆ ಸಹಾಯ ಮಾಡಲು ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್ ಸ್ಕೌಟ್ಸ್‌ಗಳನ್ನು ನಿಯೋಜಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ರಾಜ್ಯಗಳ ಯಾವ್ಯಾವ ಭಾಗಗಳಲ್ಲಿ ಕೃಷಿ ತ್ಯಾಜ್ಯ ಸುಡಲಾಗುತ್ತದೆ ಎಂಬ ಮಾಹಿತಿ ಸೇರಿದಂತೆ ವಿವಿಧ ಹಂತಗಳಲ್ಲಿ ಲೋಕೂರ್ ಸಮಿತಿಗೆ ನೆರವಾಗಬೇಕು ಎಂದು ಸುಪ್ರೀಂಕೋರ್ಟ್‌ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ (ಇಪಿಸಿಎ), ಹರಿಯಾಣ, ಪಂಜಾಬ್‌, ಉತ್ತರ ಪ್ರದೇಶ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.

ಲೋಕೂರ್ ನೇತೃತ್ವದ ಸಮಿತಿ ಹದಿನೈದು ದಿನಗಳ ಕಾಲ ಅಧ್ಯಯನ ನಡೆಸಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲಿದೆ ಎಂದು ಪೀಠ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com