ಶರದ್ ಪವಾರ್-ಉದ್ಧವ್ ಠಾಕ್ರೆ
ಶರದ್ ಪವಾರ್-ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಸರ್ಕಾರ ವಜಾ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ವಜಾಗೊಳಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ವಜಾಗೊಳಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಹಾಗೂ ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ, ಈ ರೀತಿಯ ಮನವಿಗಳಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

"ಅರ್ಜಿದಾರರಿಗೆ ಈ ಸಂಬಂಧ ರಾಷ್ಟ್ರಪತಿಯನ್ನು ಸಂಪರ್ಕಿಸಲು ಸ್ವಾತಂತ್ರ್ಯ ಇದೆ. ಆದರೆ ನಮ್ಮ ಬಳಿ ಬರಬೇಡಿ" ಎಂದು ಉನ್ನತ ನ್ಯಾಯಾಲಯ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ವಿಚಾರಣೆಯಲ್ಲಿ ತಿಳಿಸಿದೆ.

ಉದ್ಧವ್ ಠಾಕ್ರೆ ಸರ್ಕಾರ ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ಮತ್ತು ಕಾನೂನು ನಿಬಂಧನೆಗಳಿಗೆ ಅನುಗುಣವಾಗಿ ಆಡಳಿತ ನಡೆಸುತ್ತಿಲ್ಲ. ಹೀಗಾಗಿ ಸರ್ಕಾರವನ್ನು ವಜಾಗೊಳಿಸುವಂತೆ ಕೋರಿ ವಿಕ್ರಮ್ ಗೆಹ್ಲೋಟ್ ಅವರು ಪಿಐಎಲ್ ಸಲ್ಲಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com