ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಬಾಂಗ್ಲಾ, ಪಾಕಿಸ್ತಾನಕ್ಕಿಂತಲೂ ಕೆಳಸ್ಥಾನದಲ್ಲಿ ಭಾರತ
ಈ ಬಾರಿಯ ಜಾಗತಿಕ ಹಸಿವು ಸೂಚ್ಯಂಕ ಬಿಡುಗಡೆಯಾಗಿದ್ದು,107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳ ಸ್ಥಾನದಲ್ಲಿದೆ.
Published: 17th October 2020 10:45 AM | Last Updated: 17th October 2020 12:17 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಈ ಬಾರಿಯ ಜಾಗತಿಕ ಹಸಿವು ಸೂಚ್ಯಂಕ ಬಿಡುಗಡೆಯಾಗಿದ್ದು,107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳಸ್ಥಾನದಲ್ಲಿದೆ.
ವಿಶ್ವದಾದ್ಯಂತ ಹಸಿವಿನ ಮಟ್ಟ ಮತ್ತು ಅಪೌಷ್ಟಿಕತೆ ಲೆಕ್ಕಹಾಕುವ ಸೂಚ್ಯಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ನೇಪಾಳ ಮತ್ತು ಬಾಂಗ್ಲಾದೇಶ ಕ್ರಮವಾಗಿ 73 ಮತ್ತು 75 ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 88 ನೇ ಸ್ಥಾನದಲ್ಲಿದೆ.
ವೆಲ್ತುಂಗರ್ಹಿಲ್ಫ್ ಮತ್ತು ಕನ್ಸರ್ನ್ ವರ್ಲ್ಡ್ ವೈಡ್ ಜಂಟಿಯಾಗಿ ಬಿಡುಗಡೆ ಮಾಡಿರುವ ವರದಿ ಪ್ರಕಾರ ಭಾರತ ಹಸಿವಿನ ಮಟ್ಟ 27.2 ರೊಂದಿಗೆ ಗಂಭೀರವಾಗಿದೆ.
ಈ ವರದಿ ವಸ್ತುಸ್ಥಿತಿಯನ್ನು ತೋರಿಸುತ್ತಿದೆ, ದೇಶದಲ್ಲಿನ ಹಸಿವಿನ ಮಟ್ಟವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಹಾರ ಭದ್ರತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹೋರಾಟಗಾರರು ಹೇಳಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕವು ಅನೇಕರ ಆಹಾರ ಮತ್ತು ಪೌಷ್ಠಿಕಾಂಶದ ಸುರಕ್ಷತೆಯನ್ನು ದುರ್ಬಲಗೊಳಿಸಿದೆ ಮತ್ತು ಇದರ ಪರಿಣಾಮಗಳು ಭವಿಷ್ಯದಲ್ಲಿ ಏರಿಳಿತ ಉಂಟುಮಾಡಬಹುದೆಂದು ಎಂದು ವರದಿ ತಿಳಿಸಿದೆ.