ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

Published: 17th October 2020 08:50 AM  |   Last Updated: 17th October 2020 08:50 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಅನಂತ್ ನಾಗ್ ಜಿಲ್ಲೆಯ ಲರ್ನೂ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡುಬಂದ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಇಂದು ಬೆಳಿಗ್ಗೆಯಿಂದಲೇ ಜಂಟಿ ಕಾರ್ಯಾಚರಣೆಗಿಳಿದಿತ್ತು. 

ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಧಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರನ ಬಳಿಯಿದ್ದ ಎಕೆ ರೈಫಲ್ ಹಾಗೂ ಸ್ಫೋಟಕ ವಸ್ತುಗಳನ್ನು ಭದ್ರತಾಪಡೆಗಳು ವಶಕ್ಕೆ ಪಡೆದಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp