ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಜಂಟಿ ಪ್ರಣಾಳಿಕೆ ಬಿಡುಗಡೆ, ರೈತರ ಸಾಲ ಮನ್ನಾ ಭರವಸೆ

ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಶನಿವಾರ ಜಂಟಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಹಾರದ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.
ತೇಜಸ್ವಿ ಯಾದವ್
ತೇಜಸ್ವಿ ಯಾದವ್

ಪಾಟ್ನಾ: ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಶನಿವಾರ ಜಂಟಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಹಾರದ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

"ಪ್ರಾನ್ ಹಮರಾ"(ನಮ್ಮ ನಿರ್ಣಯ) ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಪ್ರಣಾಳಿಕೆಯ ಮುಖಪುಟದಲ್ಲಿ ಸಿಎಂ ಅಭ್ಯರ್ಥಿ, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್, ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹಾಗೂ ಇತರ ನಾಯಕರ ಚಿತ್ರಗಳಿವೆ.

ರಾಜ್ಯದಲ್ಲಿ ಮಹಾಘಟಬಂದನ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ರೈತರ ಸಾಲ ಮನ್ನಾ ಹಾಗೂ 10 ಲಕ್ಷ ಉದ್ಯೋಗ ನೀಡುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಯಾದವ್ ಅವರು, "ನಿತೀಶ್ ಕುಮಾರ್ ಅವರ ಜಲ-ಜೀವನ್-ಹರಾಯಳಿ ಮಿಷನ್ ಗೆ ಮೀಸಲಿಟ್ಟ 24,000 ಕೋಟಿ ರೂ. ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com