ಪಂಜಾಬ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್ ಅಂತ್ಯಕ್ರಿಯೆ

ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ, ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್‌ ಸಂಧು ಅವರ ಅಂತ್ಯಕ್ರಿಯೆ ನೆರವೇರಿದೆ. 
ಪಂಜಾಬ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್ ಅಂತ್ಯಕ್ರಿಯೆ
ಪಂಜಾಬ್ ನಲ್ಲಿ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್ ಅಂತ್ಯಕ್ರಿಯೆ

ಪಂಜಾಬ್: ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ, ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಬಲ್ವಿಂದರ್‌ ಸಿಂಗ್‌ ಸಂಧು ಅವರ ಅಂತ್ಯಕ್ರಿಯೆ ನೆರವೇರಿದೆ. 

ಸಾವಿರಾರು ಜನರು ಬಲ್ವಿಂದರ್ ಸಿಂಗ್ ಅವರ ಅಂತ್ಯಕ್ರಿಯೆ ವೇಳೆ ನೆರೆದಿದ್ದರು. 

ಬಲ್ವಿಂದರ್‌ ಸಿಂಗ್‌ (62 ವರ್ಷ) ಅವರನ್ನು ಅಪರಿಚಿತ ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪಂಜಾಬ್ ಸಿಂಗ್ ಬಲ್ವಿಂದರ್ ಸಿಂಗ್ ಅವರಿಗೆ ನೀಡಿದ್ದ ಭದ್ರತೆ ಹಿಂಪಡೆದ ಕೆಲವೇ ತಿಂಗಳಲ್ಲಿ ಹತ್ಯೆ ನಡೆದಿದ್ದು, ಹಂತಕರನ್ನು ಬಂಧಿಸುವವರೆಗೆ ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಕುಟುಂಬ ಪಟ್ಟು ಹಿಡಿದಿತ್ತು.  ಆದರೆ ಜಿಲ್ಲಾಡಳಿತ ಮನವೊಲಿಕೆ ಮಾಡಿದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 

ಕ್ಷೇತ್ರದ ಶಾಸಕ ಸುಖ್ ಪಾಲ್ ಸಿಂಗ್ ಭುಲ್ಲರ್ ಸಹ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿದರು. ಘಟನೆ ಬೆನ್ನಲ್ಲೇ ಪೊಲೀಸ್ ಇಲಾಖೆ ಬಲ್ವಿಂದರ್‌ ಸಿಂಗ್‌ ಕುಟುಂಬಕ್ಕೆ ಭದ್ರತೆ ನೀಡಲಾಗಿದ್ದು, ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಜಿಲ್ಲಾಡಳಿತ ಭರವಸೆಯನ್ನೂ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com