ನಕಲಿ ಟಿಆರ್ ಪಿ ಕೇಸು: ಎಫ್ಐಆರ್ ರದ್ದು ಕೋರಿ ಮುಂಬೈ ಹೈಕೋರ್ಟ್ ಮೊರೆ ಹೋದ ರಿಪಬ್ಲಿಕ್ ಟಿವಿ

ನಕಲಿ ಟಿಆರ್ ಪಿ ಕೇಸಿನಲ್ಲಿ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಟಿವಿಯ ಮಾಲೀಕ ಸಂಸ್ಥೆ ಎಆರ್ ಜಿ ಔಟ್ಲಿಯರ್ ಮೀಡಿಯಾ ಪ್ರೈ.ಲಿಮಿಟೆಡ್ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪತ್ರಕರ್ತ ಅರ್ನಬ್ ಗೋಸ್ವಾಮಿ
ಪತ್ರಕರ್ತ ಅರ್ನಬ್ ಗೋಸ್ವಾಮಿ

ಮುಂಬೈ: ನಕಲಿ ಟಿಆರ್ ಪಿ ಕೇಸಿನಲ್ಲಿ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಟಿವಿಯ ಮಾಲೀಕ ಸಂಸ್ಥೆ ಎಆರ್ ಜಿ ಔಟ್ಲಿಯರ್ ಮೀಡಿಯಾ ಪ್ರೈ.ಲಿಮಿಟೆಡ್ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೇಸಿನ ಬಗ್ಗೆ ಮುಕ್ತ ಮತ್ತು ಪಾರದರ್ಶಕವಾಗಿ ತನಿಖೆ ನಡೆಯಲು ಮತ್ತು ಈ ಪ್ರಕರಣವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪರಿಣಾಮ ಬೀರುವುದರಿಂದ ಸಿಬಿಐಗೆ ವಹಿಸಬೇಕೆಂದು ಸಹ ಅರ್ಜಿಯಲ್ಲಿ ಕೋರಿದ್ದಾರೆ.ಮೊನ್ನೆ ಅಕ್ಟೋಬರ್ 16ರಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವ ಸುದ್ದಿವಾಹಿನಿಯ ಹಿರಿಯ ಅಧಿಕಾರಿಯೊಬ್ಬರು ಮುಂಬೈ ಪೊಲೀಸರು ಹೊರಡಿಸಿದ್ದ ಸಮ್ಮನ್ಸ್ ನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿ ಮುಂಬೈ ಹೈಕೋರ್ಟ್ ಮೊರೆ ಹೋಗುವಂತೆ ಸೂಚಿಸಿತ್ತು.

ಮುಂಬೈ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ನಕಲಿ ಟಿಆರ್ ಪಿ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com