ಭದ್ರತಾ ಪಡೆಗಳಿಂದ ಅರುಣಾಚಲದಲ್ಲಿ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರ ಹತ್ಯೆ

ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.

Published: 18th October 2020 01:39 PM  |   Last Updated: 18th October 2020 01:39 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : UNI

ಇಟಾನಗರ: ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಸಾಮಾನ್ಯ ಪ್ರದೇಶವಾದ ವಕ್ಕಾದಲ್ಲಿ ಶನಿವಾರ ಪೊಲೀಸರೊಂದಿಗೆ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿವೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ತೇಜ್ಪುರ ಮೂಲದ ರಕ್ಷಣಾ ಸಾರ್ವಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಷ್ ವರ್ಧನ್ ಪಾಂಡೆ ಹೇಳಿದರು.

ಭದ್ರತಾ ಪಡೆಗಳು ಘಟನಾ ಸ್ಥಳದಿಂದ ಲತೋಡ್ ಬಂಧೂಕು ಮತ್ತು ಮೂರು ಜೀವಂತ ಗುಂಡುಗಳು, ಒಂದು .32 ಪಿಸ್ತೂಲ್ ಮತ್ತು ಒಂದು ಸುತ್ತಿನ ಚೈನಾ ನಿರ್ಮಿತ ಕೈ ಗ್ರೆನೇಡ್ ವಶಪಡಿಸಿಕೊಂಡಿದ್ದು, ಇವನ್ನು ಲಾಂಗ್ಡಿಂಗ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
 

Stay up to date on all the latest ರಾಷ್ಟ್ರೀಯ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp