ಸ್ವಾಭಿಮಾನ ಇದ್ದಿದ್ದರೆ ರಾಜ್ಯಪಾಲ ಕೋಶಿಯಾರಿ ಹುದ್ದೆಯಲ್ಲಿ ಮುಂದುವರೆಯುತ್ತಿರಲಿಲ್ಲ: ಶರದ್ ಪವಾರ್

ಸ್ವಾಭಿಮಾನ, ಆತ್ಮಗೌರವ ಇರುವ ಯಾರೂ ಹುದ್ದೆಯಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ವಿರುದ್ಧ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್
ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್

ಮುಂಬೈ: ಸ್ವಾಭಿಮಾನ, ಆತ್ಮಗೌರವ ಇರುವ ಯಾರೂ ಹುದ್ದೆಯಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ವಿರುದ್ಧ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಉಸ್ಮಾನಾಬಾದ್‌ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಅವರು, ದೇವಾಲಯಗಳನ್ನು ತೆರೆಯುವ ವಿಚಾರದಲ್ಲಿ ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವಿನ ಪತ್ರ ವ್ಯವಹಾರದ ಸುತ್ತಲಿನ ಬೆಳವಣಿಗೆಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. 

ಪತ್ರದಲ್ಲಿ ಕೆಲವು ಪದಗಳ ಬಳಕೆಯನ್ನು ತಪ್ಪಿಸಬಹುದಿತ್ತು ಎಂದು ಅಮಿತ್‌ ಶಾ ಹೇಳಿದ್ದಾರೆ. ಇಂತಹ ಹೇಳಿಕೆ ನಂತರವೂ ಸ್ವಾಭಿಮಾನ ಇರುವ ಯಾವ ವ್ಯಕ್ತಿಯೂ ಆ ಹುದ್ದೆಯಲ್ಲಿ ಮುಂದುವರಿಯುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ದೇವಾಲಯಗಳನ್ನು ತೆರೆಯ ವಿಚಾರದಲ್ಲಿ ರಾಜ್ಯಪಾಲರು, ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’ಶಿವಸೇನಾ ಇದ್ದಕ್ಕಿದ್ದಂತೆ ಜಾತ್ಯತೀತವಾಗಿ ಬದಲಾಯಿತಾ’ ಎಂದು ಉಲ್ಲೇಖಿಸಿದ್ದರು. ಈ ಬೆಳವಣಿಗೆ ನಂತರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸುದ್ದಿವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ರಾಜ್ಯಪಾಲರು ಪತ್ರದಲ್ಲಿ ಬಳಸಿದ ಭಾಷೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

’ಪತ್ರದಲ್ಲಿ ಬಳಸಿರುವ ಭಾಷೆ ಬಗ್ಗೆ ಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ನಂತರ ಸ್ವಾಭಿಮಾನಿ ಇರುವ ಯಾರೂ ಈ ಹುದ್ದೆಯಲ್ಲಿ ಮುಂದುವರಿಯಬೇಕೇ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿದ್ದರು’ ಎಂದು ಶರದ್‌ಪವಾರ್, ಭಗತ್‌ಸಿಂಗ್ ಅವರ ಹೆಸರು ಪ್ರಸ್ತಾಪಿಸಿದೆಯೇ ಟೀಕಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com