ಕೋವಿಡ್-19 ಕಾರಣದಿಂದಾಗಿ ಸಿಎಎ ಜಾರಿ ವಿಳಂಬ, ಶೀಘ್ರದಲ್ಲೇ ಜಾರಿಗೆ ಬರಲಿದೆ: ಜೆ ಪಿ ನಡ್ಡಾ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ(ತಿದ್ದುಪಡಿ) ಕಾಯ್ದೆ ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೋಮವಾರ ಹೇಳಿದ್ದಾರೆ.
ಜೆ ಪಿ ನಡ್ಡಾ
ಜೆ ಪಿ ನಡ್ಡಾ

ಸಿಲಿಗುರಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ(ತಿದ್ದುಪಡಿ) ಕಾಯ್ದೆ ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೋಮವಾರ ಹೇಳಿದ್ದಾರೆ.

ಉತ್ತರ ಬಂಗಾಳದ ಸಾಮಾಜಿಕ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ನಡ್ಡಾ ಅವರು, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ತನ್ನ ಪಕ್ಷ ಟಿಎಂಸಿಯ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ರಾಜ್ಯದಲ್ಲಿ "ಒಡೆದು ಆಳುವ ರಾಜಕಾರಣ" ಮಾಡುತ್ತಿದೆ ಎಂದು ಆರೋಪಿಸಿದರು. ಆದರೆ ಬಿಜೆಪಿ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ ಎಂದರು.

"ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ, ಸಿಎಎ ಅನುಷ್ಠಾನ ವಿಳಂಬವಾಯಿತು. ಆದರೆ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಈಗ ಅದರ ಕೆಲಸ ಆರಂಭವಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು" ಎಂದು ನಡ್ಡಾ ಹೇಳಿದ್ದಾರೆ.

ಟಿಎಂಸಿ ಸರ್ಕಾರದ ಹಿಂಸಾಚಾರ ಮತ್ತು ಕಟ್-ಮನಿ ಸಂಸ್ಕೃತಿಯಿಂದ ರಾಜ್ಯದ ಜನರು ಬೇಸರಗೊಂಡಿರುವುದರಿಂದ 2021 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂದು ಜೆಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com