ಶೋಪಿಯಾನ್‌ನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಓರ್ವ ಉಗ್ರ ಮಟಾಶ್!

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಇಂದು ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಇಂದು ಮಧ್ಯಾಹ್ನ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯ ತಂಡ, ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಜಂಟಿಯಾಗಿ ಇಂದು ಮಧ್ಯಾಹ್ನ ಶೋಪಿಯಾನ್‌ನ ಮೆಲ್ಹೋರಾ ಗ್ರಾಮದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಉಗ್ರರ ಉಪಸ್ಥಿತಿಯ ಬಗ್ಗೆ ಸುಳಿವು ನೀಡಿದ ನಂತರ ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com