ಬಿಹಾರ ಚುನಾವಣೆ: 1ನೇ ಹಂತದಲ್ಲಿ ಶೇ. 31ರಷ್ಟು ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆ

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ 1,064 ಅಭ್ಯರ್ಥಿಗಳ ಪೈಕಿ ಶೇಕಡಾ 31 ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ 1,064 ಅಭ್ಯರ್ಥಿಗಳ ಪೈಕಿ ಶೇಕಡಾ 31 ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.

ಬಿಹಾರದಲ್ಲಿ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ವಿಧಾನಸಭೆ ಚುನಾವಣೆಗಾಗಿ 1,066 ಜನರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಶೇ. 31 ಅಥವಾ 328 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ.

ಅತೀ ದೊಡ್ಡ ಜಿಲ್ಲೆಯಾಗಿರುವ ಗಯಾದಲ್ಲಿನ 10 ವಿಧಾನಸಭೆ ಕ್ಷೇತ್ರಗಳಿಗೆ 49 ಜನ ಕ್ರಿಮಿನಲ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಶೇ. 23 ಅಥವಾ 244 ಅಭ್ಯರ್ಥಿಗಳು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಘೋಷಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com