ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಪಂಜಾಬ್ ಸಿಎಂ
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.
Published: 20th October 2020 01:02 PM | Last Updated: 20th October 2020 01:02 PM | A+A A-

ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್
ಚಂಡೀಗಢ: ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.
ನೂತನ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಸದನದ ನಾಯಕ ನಿರ್ಣಯ ಮಂಡನೆ ಮಾಡಿದರು.
ಕೇಂದ್ರದ ಕೃಷಿ ಕಾನೂನುಗಳನ್ನು ಎದುರಿಸಲು ಮೂರು ಮಸೂದೆಗಳನ್ನು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪರಿಚಯಿಸಿದರು.
ಅಮರೀಂದರ್ ಸಿಂಗ್ ಅವರು ಪರಿಚಯಿಸಿದ ಮೂರು ಮಸೂದೆಗಳು ಇಂತಿವೆ...ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020, ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು ಬೆಲೆ ಭರವಸೆ ಕುರಿತು ರೈತರ ಒಪ್ಪಂದ ಮತ್ತು ಕೃಷಿ ಸೇವೆಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020.
ಸದನವನ್ನುದ್ದೇಶಿಸಿ ಮಾತನಾಡಿರುವ ಸಿಂಗ್ ಅವರು, ಕೃಷಿ ರಾಜ್ಯದ ವಿಚಾರವಾಗಿದ್ದು, ಕೇಂದ್ರ ಸರಕಾರ ಇದನ್ನು ನಿರ್ಲಕ್ಷಿಸುತ್ತಿದೆ. ಭಾರತ ಸರಕಾರ ಮಾಡಲು ಹೊರಟಿರುವ ಕೆಲಸವು ನನಗೆ ವಿಚಿತ್ರವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.