ಭಾರತದಲ್ಲಿ ಕೊರೋನಾ ಪ್ರಕರಣಗಳಲ್ಲಿ ಗಣನೀಯ ಇಳಿಕೆ: 24 ಗಂಟೆಗಳಲ್ಲಿ 46,791 ಕೇಸ್ ಪತ್ತೆ!

ಭಾರತದ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 24 ಗಂಟೆಗಳಲ್ಲಿ 46,791 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 24 ಗಂಟೆಗಳಲ್ಲಿ 46,791 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಒಂದೇ ದಿನ 46,791 ಕೇಸ್ ಪತ್ತೆಯಾಗುವುದರೊಂದಿಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,97,064ಕ್ಕೆ ತಲುಪಿದೆ. ಇದರಂತೆ ಸಾವಿನ ಸಂಖ್ಯೆ ಕೂಡ 1,15,197ಕ್ಕೆ ಏರಿಕೆಯಾಗಿದೆ. 

75,97,064 ಒಟ್ಟು ಸೋಂಕಿತರ ಪೈಕಿ ಈ ವರೆಗೂ 67,33,329 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 7,48,538 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,32,795 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,61,16,771 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com