ಬಿಜೆಪಿ ನಾಯಕ ಏಕನಾಥ್ ಖಡ್ಸೆ ಎನ್ ಸಿಪಿ ಸೇರುತ್ತಾರೆ: ಮಹಾ ಸಚಿವ ಜಯಂತ್ ಪಾಟೀಲ್

ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

Published: 21st October 2020 03:26 PM  |   Last Updated: 21st October 2020 04:34 PM   |  A+A-


Maharashtra minister Eknath Khadse resigns

ಏಕನಾಥ್ ಖಡ್ಸೆ

Posted By : Lingaraj Badiger
Source : PTI

ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

"ಅವರು (ಖಡ್ಸೆ) ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಎನ್‌ಸಿಪಿಗೆ ಸೇರಲಿದ್ದಾರೆ. ಅವರ ಸೇರ್ಪಡೆ ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದಲೂ ಅವರು ತೀವ್ರ ಬೇಸರದಲ್ಲಿದ್ದರು.

ಕಳೆದ ಕೆಲವು ದಿನಗಳಿಂದ ಖಾಡ್ಸೆ ಅವರು ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಸೇರಬಹುದು ಎಂಬ ಉಹಾಪೋಹಗಳು ಇದ್ದವು. ಇದೀಗ ಅದು ನಿಜವಾಗಿದೆ.

Stay up to date on all the latest ರಾಷ್ಟ್ರೀಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp