ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಖರ್ಚು ಮಿತಿ ಹೆಚ್ಚಳ 

ಲೋಕಸಭೆ, ವಿಧಾನಸಭೆ ಚುನಾವಣೆಗಳ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ.10 ರಷ್ಟು ಹೆಚ್ಚಳ ಮಾಡಲಾಗಿದೆ. 

Published: 21st October 2020 01:37 AM  |   Last Updated: 21st October 2020 01:37 AM   |  A+A-


Election Commission

ಚುನಾವಣಾ ಆಯೋಗ

Posted By : Srinivas Rao BV
Source : Online Desk

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಗಳ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ.10 ರಷ್ಟು ಹೆಚ್ಚಳ ಮಾಡಲಾಗಿದೆ. ಚುನಾವಣಾ ಆಯೋಗದ ಶಿಫಾರಸಿನ ಆಧಾರದಲ್ಲಿ ಮಿತಿಯ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, 

ಕೋವಿಡ್-19 ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳಿಗೆ ಎದುರಾಗಬಹುದಾದ ತೊಂದರೆಗಳನ್ನು ಪರಿಗಣಿಸಿ ಆಯೋಗ ಖರ್ಚು-ವೆಚ್ಚಗಳ ಮಿತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. 

ತಕ್ಷಣದಿಂದಲೇ ಜಾರಿಗೆ ಬರುವ ಈ ಆದೇಶದಿಂದ ಬಿಹಾರ ವಿಧಾನಸಭೆ, ಲೋಕಸಭೆಯ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. 

ಅಧಿಸೂಚನೆಯ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು 70 ಲಕ್ಷ ರೂಪಾಯಿಗಳಿಂದ 77 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದರೆ, ಸಣ್ಣ ರಾಜ್ಯಗಳಲ್ಲಿ ಈ ಮೊತ್ತವನ್ನು 54 ಲಕ್ಷ ರೂಪಾಯಿಗಳಿಂದ 59 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. 

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು 28 ಲಕ್ಷಗಳಿಂದ 30.8 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಈ ಹಿಂದೆ 20 ಲಕ್ಷ ಮಿತಿ ಇದ್ದ ಕಡೆ 22 ಲಕ್ಷಗಳಿಗೆ ಮಿತಿಯನ್ನು ಏರಿಕೆ ಮಾಡಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp