ಉತ್ತರ ಪ್ರದೇಶದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ: ಕೃಷಿ ಕಾಯಿದೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಹೊಸ ಕೃಷಿ ಕಾಯಿದೆ ಸಂಬಂಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಉತ್ತರ ಪ್ರದೇಶದ ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ಗಿಂತ ಕಡಿಮೆ ದರದಲ್ಲಿ ಭತ್ತ ಮಾರಾಟ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ

ನವದೆಹಲಿ: ಹೊಸ ಕೃಷಿ ಕಾಯಿದೆ ಸಂಬಂಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಉತ್ತರ ಪ್ರದೇಶದ ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ಗಿಂತ ಕಡಿಮೆ ದರದಲ್ಲಿ ಭತ್ತ ಮಾರಾಟ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.

ಮೊಹಮ್ಮದಿ ಖಿರಿ ಮಂಡಿಯಲ್ಲಿ ಭತ್ತ ಖರೀದಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ರೈತನ ವಿಡಿಯೋವೊಂದನ್ನು ಟ್ವಿಟರ್‌ ನಲ್ಲಿ ಷೇರ್ ಮಾಡಿರುವ ಪ್ರಿಯಾಂಕಾ, ಉತ್ತರ ಪ್ರದೇಶ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ ಎಂದು ದೂರಿದ್ದಾರೆ.

"ಕೇಂದ್ರ ಸರ್ಕಾರ ರೈತರ ಹಿತಾಸಕ್ತಿಗೆ ವಿರುದ್ಧವಾದ ಕೃಷಿ ಕಾಯಿದೆಗಳನ್ನು ಜಾರಿಗೆ ತಂದಿದೆ. ಆದರೆ ರೈತರ ನೋವನ್ನು ಆಲಿಸುತ್ತಿಲ್ಲ" ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

"ಉತ್ತರ ಪ್ರದೇಶದ ಬಹುತೇಕ ಎಲ್ಲ ಸ್ಥಳಗಳಲ್ಲಿ, ರೈತರು ತಮ್ಮ ಭತ್ತದ ಬೆಳೆಗಳನ್ನು ಕ್ವಿಂಟಲ್‌ಗೆ 1,000 ರಿಂದ 1,100 ರೂ.ಗೆ ಮಾರಾಟ ಮಾಡಲು ಒತ್ತಾಯಿಸಲಾಗುತ್ತಿದೆ, ಆದರೆ ಭತ್ತಕ್ಕೆ ಕ್ವಿಂಟಲ್ 1,868 ರೂ.ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಇದು ಎಂಎಸ್ ಪಿಗಿಂತ 800 ರೂ ಕಡಿಮೆ ಇದೆ" ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com